ಬೆಂಗಳೂರು :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಶುಕ್ರವಾರದಿಂದ (ಜೂ.14) ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಶುಕ್ರವಾರ ರಾತ್ರಿ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ ಮರುದಿನ ಶನಿವಾರ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಬಳಿಕ ಅಂದು ಮಧ್ಯಾಹ್ನ 2.30ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ನೀತಿ ಆಯೋಗದ ಕೌನ್ಸಿಲ್‌ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾತ್ರಿ ಕರ್ನಾಟಕ ಭವನದಲ್ಲಿ ಉಳಿದು ಭಾನುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.