ಬೆಂಗಳೂರು [ಜು.12] : ರಾಜ್ಯ ರಾಜಕೀಯದಲ್ಲಿ ಭಾರೀ ಪ್ರಹಸನ ನಡೆಯುತ್ತಿದ್ದು, ಇದೀಗ ಸಾ ರಾ ಮಹೇಶ್,  ಸಿಎಂ ಕುಮಾರಸ್ವಾಮಿ  ಅವರನ್ನು ಭೇಟಿ ಮಾಡಿದ್ದಾರೆ. 

ಬಿಜೆಪಿ ನಾಯಕರನ್ನು ಭೇಟಿ ಮಾಡಿರುವ ಸಂಬಂಧ ಮಹೇಶ್ ವಿರುದ್ಧ ಸಿಎಂ ಗರಂ ಆಗಿದ್ದು, ಇದೇ ವಿಚಾರವಾಗಿ ಚರ್ಚೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಈಶ್ವರಪ್ವ  ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಭೇಟಿಯ ಬಗ್ಗೆ ಸಿಎಂಗೆ ವಿವರಣೆ ನೀಡಿದ್ದಾರೆ. ಆದರೆ ಸಾ ರಾ ನಡೆ ಬಗ್ಗೆ ಸಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,  ಇಂತಹ ಸಂದರ್ಭದಲ್ಲಿ ನೀವು ಈ ರೀತಿಯಾಗಿ ಬೇಜವಾಬ್ದಾರಿಯಾಗಿ ನಡೆದುಕೊಂಡಿದ್ದು ಯಾಕೆಂದು  ಪ್ರಶ್ನೆ ಮಾಡಿದ್ದಾರೆ. 

ಮೊದಲೆ ನಮ್ಮ ಸರ್ಕಾರದ ಪರಿಸ್ಥಿತಿ ಈ ರೀತಿಯಾದ ಡೋಲಾಯಮಾನ ಸ್ಥಿತಿಯಲ್ಲಿದೆ.  ನೀವು ಇನ್ನೂ ಡ್ಯಾಮೇಜ್ ಮಾಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.