(ಚಿತ್ರದಲ್ಲಿ: ಪರಿಹಾರ ತಂತ್ರಾಂಶದ ಮೂಲಕ ಇನ್'ಪುಟ್ ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುತ್ತಿರುವ ಮುಖ್ಯಮಂತ್ರಿ)
ಬೆಂಗಳೂರು (ಮೇ.06): ಬರ ಪೀಡಿತ ಪ್ರದೇಶಗಳಿಗೆ ತಿಂಗಳಲ್ಲಿ ಒಂದು ಬಾರಿ ಕಡ್ಡಾಯವಾಗಿ ಭೇಟಿ ನೀಡಿ ಬರ ಪರಿಹಾರ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶಿರ್ಗಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ, ವಿಳಂಬಕ್ಕೆ ಕುಂಟು ನೆಪ ಹೇಳಬೇಡಿ ಅಂತ ಸೂಚಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸಿದ ಅನುಭವ ಇದೆ ಎಂಬ ಕಾರಣಕ್ಕಾಗಿಯೇ ನಿಮ್ಮನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಹೀಗಾಗಿ ತಿಂಗಳಲ್ಲಿ ಒಂದು ಬಾರಿ ಜಿಲ್ಲೆಗಳಿಗೆ ಹೋಗಿ ಅಭಿವೃದ್ಧಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ಕೊಡಿ ಎಂದು ಸಿಎಂ ಹೇಳಿದ್ದಾರೆ.
ಗೋಶಾಲೆಗಳಿಗೆ ಬರುವ ಜನರಿಗೆ ಊಟ, ವಸತಿ ವ್ಯವಸ್ಥೆ ಸರಿಯಾಗಿ ಸಿಗುವಂತೆ ನೋಡಿಕೊಳ್ಳಬೇಕು. ವಸತಿ ಯೋಜನೆ ಪ್ರಗತಿ ಕುರಿತು ಪರಿಶೀಲನೆ ನಡೆಸಬೇಕು. ನಿಗದಿತ ಅವಧಿಯೊಳಗೆ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಬರ ಪೀಡಿತ ಪ್ರದೇಶದ ಜಾನುವಾರುಗಳಿಗೆ ಎಷ್ಟು ಮೇವು ಬೇಕಾಗುತ್ತೆ ಎಂಬುವುದನ್ನು ಮೊದಲೇ ತಿಳಿದುಕೊಳ್ಳಬೇಕು, ಎಂದು ಸಿಎಂ ಹೇಳಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿ ರೈತರ ಕುಟುಂಬಕ್ಕೆ ಪರಿಹಾರ ಒದಗಿಸುವ ಜೊತೆಗೆ ಮೃತ ರೈತನ ಪತ್ನಿಗೆ ಮಾಸಾಶನ, ಶಿಕ್ಷಣ, ಆರೋಗ್ಯ ಸೇವೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು, ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
