ಮಾಜಿ ಶಾಸಕ ವಿಜಯ್ ಕುಮಾರ್ ಖಂಡ್ರೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಖಂಡ್ರೆ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

ಭಾಲ್ಕಿ :  ಮಾಜಿ ಶಾಸಜ ವಿಜಯ್ ಕುಮಾರ್ ಖಂಡ್ರೆ [60] ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಖಂಡ್ರೆ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಧಿಕಾರದ ಅವಧಿಯಲ್ಲಿ ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಹೇಳಿದ್ದಾರೆ.

ಮಾಜಿ ಶಾಸಕ ಡಾ. ವಿಜಯಕುಮಾರ ಖಂಡ್ರೆ ವರಿಗೆ ತೀವ್ರ ಹೃದಯಾಘಾತವಾಗಿದ್ದು,ಈನಿಟ್ಟಿನಲ್ಲಿ ಅವರನ್ನು ಖಾಸಗಿಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಖಂಡ್ರೆ ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಭಾಲ್ಕಿ ವಿಧಾನಸಭೆ ಕ್ಷೇತ್ರದಿಂದ 1989ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ 1994ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಹಿರಿಯ ಪುತ್ರ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಸಹೋದರರಾಗಿದ್ದಾರೆ.