Asianet Suvarna News Asianet Suvarna News

ರೈತರಿಗೆ ಶೀಘ್ರವೇ ಹಣ ನೀಡಿ : ಸಿಎಂ

ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ  ಶೀಘ್ರ ಹಣವನ್ನು ಪಾವತಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಹೇಳಿದರು. ಸಕ್ಕರೆ ಕಾರ್ಖಾನೆ ಮಾಲಿಕರೊಂದಿಗೆ ಸಭೆ ನಡೆಸಿ ಈ ಸೂಚನೆ ನೀಡಿದರು.

CM Kumaraswamy Order To Clear farmer dues immediately

ಬೆಂಗಳೂರು :  ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕಬ್ಬು ಬೆಳೆಗಾರರ ಪಾವತಿ ಮಾಡದಿರಲು ಇರುವ ಸಮಸ್ಯೆಗಳ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಕಾರ್ಖಾನೆ ಮಾಲೀಕರ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಕೇಂದ್ರದ ನೀತಿಯಿಂದಾಗಿ ಸಕ್ಕರೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡಿ ಎಂದರು.

ಕೇಂದ್ರ ನೀತಿಯಿಂದಾಗಿ ಕಾರ್ಖಾನೆಯಲ್ಲಿನ ಸಕ್ಕರೆಯನ್ನು ಮಾರಾಟ ಮಾಡದಿರುವಂತೆ ಆಗಿದೆ. ಇದರಿಂದ ಹಣಕಾಸಿನ ಸಮಸ್ಯೆ ಎದುರಿಸುವಂತಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಆದರೆ, ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ ಬಾಕಿ ಮೊತ್ತವನ್ನು ಪಾವತಿಸಿ ಎಂದು ಹೇಳಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ 1,045 ಕೋಟಿ ರು.ನಷ್ಟುಎರಡು ಖಾಸಗಿ ಕಾರ್ಖಾನೆಗಳು, ಏಳು ಸಹಕಾರಿ ಸಂಸ್ಥೆಗಳು ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಗಳಿಂದ ಸುಮಾರು 200 ಕೋಟಿ ರು.ನಷ್ಟುವಿದ್ಯುತ್‌ ಬಿಲ್‌ ಬರಬೇಕಾಗಿದೆ. ಸದ್ಯಕ್ಕೆ ಅದನ್ನು ಬದಿಗಿರಿಸಲಾಗಿದೆ. ಮೊದಲು ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ತಿಳಿಸಲಾಗಿದೆ. ಸರ್ಕಾರವು ಅವರಿಗೆ ಬೇಕಾದ ಸಹಕಾರ ನೀಡಲು ಸಿದ್ಧವಿದ್ಧರೂ ರೈತರ ಬಾಕಿ ಮೊತ್ತವನ್ನು ಉಳಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

:  ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಕಬ್ಬು ಬೆಳೆಗಾರರ ಪಾವತಿ ಮಾಡದಿರಲು ಇರುವ ಸಮಸ್ಯೆಗಳ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಕಾರ್ಖಾನೆ ಮಾಲೀಕರ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಕೇಂದ್ರದ ನೀತಿಯಿಂದಾಗಿ ಸಕ್ಕರೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕಾರ್ಖಾನೆಯಲ್ಲಿ ದಾಸ್ತಾನಿರುವ ಸಕ್ಕರೆಯನ್ನು ಮಾರಾಟ ಮಾಡಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಮಾಡಿ ಎಂದರು.

ಕೇಂದ್ರ ನೀತಿಯಿಂದಾಗಿ ಕಾರ್ಖಾನೆಯಲ್ಲಿನ ಸಕ್ಕರೆಯನ್ನು ಮಾರಾಟ ಮಾಡದಿರುವಂತೆ ಆಗಿದೆ. ಇದರಿಂದ ಹಣಕಾಸಿನ ಸಮಸ್ಯೆ ಎದುರಿಸುವಂತಾಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಆದರೆ, ರೈತರು ಸಂಕಷ್ಟದಲ್ಲಿರುವ ಕಾರಣ ಅವರಿಗೆ ಬಾಕಿ ಮೊತ್ತವನ್ನು ಪಾವತಿಸಿ ಎಂದು ಹೇಳಿದರು.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ 1,045 ಕೋಟಿ ರು.ನಷ್ಟುಎರಡು ಖಾಸಗಿ ಕಾರ್ಖಾನೆಗಳು, ಏಳು ಸಹಕಾರಿ ಸಂಸ್ಥೆಗಳು ಬಾಕಿ ಉಳಿಸಿಕೊಂಡಿವೆ. ಕಾರ್ಖಾನೆಗಳಿಂದ ಸುಮಾರು 200 ಕೋಟಿ ರು.ನಷ್ಟುವಿದ್ಯುತ್‌ ಬಿಲ್‌ ಬರಬೇಕಾಗಿದೆ. ಸದ್ಯಕ್ಕೆ ಅದನ್ನು ಬದಿಗಿರಿಸಲಾಗಿದೆ. ಮೊದಲು ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ತಿಳಿಸಲಾಗಿದೆ. ಸರ್ಕಾರವು ಅವರಿಗೆ ಬೇಕಾದ ಸಹಕಾರ ನೀಡಲು ಸಿದ್ಧವಿದ್ಧರೂ ರೈತರ ಬಾಕಿ ಮೊತ್ತವನ್ನು ಉಳಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

Follow Us:
Download App:
  • android
  • ios