ಬೆಂಗಳೂರು : ಶಾಲಾ ಮಕ್ಕಳಿಗೆ ಉಚಿತ ಬಸ್‌ ನೀಡುವಂತೆ ಇಲಾಖೆ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ನಿರ್ಧರಿಸಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಸ್‌ ಪಾಸ್‌ ನೀಡುವುದು ಸಾರಿಗೆ ಮತ್ತು ಹಣಕಾಸು ಇಲಾಖೆಗೆ ಸಂಬಂಧಿಸಿದ ವಿಚಾರವಾಗಿರುವ ಕಾರಣ ಸಂಬಂಧಪಟ್ಟಇಲಾಖೆಗಳ ಜತೆ ಚರ್ಚಿಸಿ ಮುಖ್ಯಮಂತ್ರಿಗಳೇ ಸರಿಯಾದ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು.