ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತ್ಯಜಿಸಲಿದ್ದಾರಾ ಸಿಎಂ?

CM Kumarswamy may resign as JDS state president
Highlights

ಖುರ್ಚಿ ಕಳೆದುಕೊಳ್ಳಲಿದ್ದಾರೆ ಕುಮಾರಸ್ವಾಮಿ?

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲಿದ್ದಾರೆ ಸಿಎಂ?

ಜೆಡಿಎಸ್‌ಗೆ ಹೊಸ ಸಾರಥಿಯ ಹುಡುಕಾಟದಲ್ಲಿ

ಜೆಡಿಎಸ್ ವರಿಷ್ಠ ದೇವೆಗೌಡ ನೇತೃತ್ವದಲ್ಲಿ ಸಭೆ

ಬೆಂಗಳೂರು(ಜು.21): ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಮೇಲೆ ಜೆಡಿಎಸ್ ಗೆ ಹೊಸ ಸಾರಥಿಯನ್ನು ಆಯ್ಕೆ ಮಾಡಲು ವರಿಷ್ಠರು ಚಿತ್ತ ಹರಿಸಿದ್ದಾರೆ. ರಾಜ್ಯಾಧ್ಯಕ್ಷ ಕುಮಾರಸ್ವಾಮಿಯನ್ನು ಬದಲಾವಣೆ ಮಾಡಲು ಪಕ್ಷದೊಳಗೆ ಪ್ಲಾನ್ ನಡೆದಿದೆ.

ಸಿಎಂ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಹೆಚ್ ಡಿಕೆಗೆ ಕಷ್ಟವಾಗುತ್ತಿದ್ದು,  ಪಕ್ಷ ಸಂಘಟನೆಗೆ ಪೂರಕವಾಗಿ ಹೊಸಬರಿಗೆ ಜವಾಬ್ದಾರಿ ನೀಡಲು ಪಕ್ಷದೊಳಗೆ ಚರ್ಚೆ ನಡೆದಿದೆ.  ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. 

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈ ಸಭೆಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. 

ಹೊಸ ಅಧ್ಯಕ್ಷರ ನೇಮಕಾತಿಯ ಸಾಧಕ - ಭಾದಕ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಲಿದ್ದು, ಆ ಬಳಿಕವೇ ರಾಜ್ಯಾಧ್ಯಕ್ಷರ ಬದಲಾವಣೆಯ ಕುರಿತು ಅಂತಿಮ ತಿರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 

ಸದ್ಯಕ್ಕೆ ಹಾಲಿ ಅಧ್ಯಕ್ಷರಾಗಿರುವ ಸಿಎಂ ಕುಮಾರಸ್ವಾಮಿ ಅವರನ್ನೇ ಮುಂದುವರಿಸಲು ಹಲವರು ಆಗ್ರಹಿಸುತ್ತಿದ್ದು, ಲೋಕಸಭಾ ಚುನಾವಣೆಗಾಗಿ ಹೊಸಬರ ಆಯ್ಕೆ ಅನಿವಾರ್ಯ ಅನ್ನೋ ಚರ್ಚೆ ಕೂಡ ಶುರುವಾಗಿದೆ ಎನ್ನಲಾಗಿದೆ. ಜಾತಿ ಸಮೀಕರಣ, ಪಕ್ಷ ನಿಷ್ಠೆಯ ಲೆಕ್ಕಾಚಾರದಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ಚಾಲನೆ ನೀಡುವ ಸಾಧ್ಯತೆ ದಟ್ಟವಾಗಿದೆ.

loader