ಬೆಂಗಳೂರು (ಸೆ.10): ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ಕ್ರಮವನ್ನು ಬಿಜೆಪಿ ಟೀಕಿಸಿದೆ.

ಕಾವೇರಿ ವಿಚಾರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ, ಎಂದು ಬಿಜೆಪಿ ವಕ್ತಾರ ಎಸ್. ಪ್ರಕಾಶ್ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ಸಾಂವಿಧಾನಿಕ ಪ್ರಕ್ರಿಯೆಗಳ ಸಂಪೂರ್ಣ ಅರಿವಿದ್ದೂ, ಪ್ರಧಾನಿಯವರು ಮಧ್ಯಪ್ರವೇಶಿಸುವಂತಿಲ್ಲ ಎಂದು ಗೊತ್ತಿದ್ದರೂ, ಸಿದ್ದರಾಮಯ್ಯನವರು ಪ್ರಧಾನಿಗೆ ಪತ್ರ ಬರೆದಿದ್ದಾರೆ, ಎಂದು ಪ್ರಕಾಶ್ ಹೇಳಿದ್ದಾರೆ.

ಆ ಮೂಲಕ ತಮ್ಮ ವೈಫಲ್ಯದ ಹೊಣೆಗಾರಿಕೆಯನ್ನು ಬೇರೆಡೆಗೆ ವರ್ಗಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಹೇಳಿದ್ದಾರೆ.