ದಾವಣಗೆರೆ [ಜು.3] : ಈಗಲೂ ಬಿಜೆಪಿಯವರು ನನ್ನ ಬೆನ್ನು ಹತ್ತಿದ್ದು, ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೇಳಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು. ಯಾರಾದರೂ ಮುಖ್ಯಮಂತ್ರಿಯಾಗಬಹುದು. ರಾಜ್ಯದಲ್ಲಿರುವ ಮೈತ್ರಿ ಸರ್ಕಾರಕ್ಕೆ ಮಾತ್ರ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ದಾವಣಗೆರೆಯಲ್ಲಿ ಶಾಸಕ ರಾಮಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. 

ಇಬ್ಬರು ಅತೃಪ್ತ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾಗಲ್ಲ. ಮಧ್ಯಂತರ ಚುನಾವಣೆಯೂ ಕೂಡ ನಡೆಯುವುದಿಲ್ಲ ಎಂದರು. 

ನನ್ನ ಆಯ್ಕೆ ಮಾಡಿದ ಜನತೆಗೆ ಮೋಸ ಮಾಡಿ ಹೋಗಲಾರೆ. ಪಕ್ಷ ತ್ಯಜಿಸುವ ಮಾತೇ ಇಲ್ಲ ಎಂದು ಶಾಸಕ ರಾಮಪ್ಪ ಹೇಳಿದ್ದಾರೆ.