ಜಯಂತಿ ಆರೋಗ್ಯ ವಿಚಾರಿಸಿದ ಸಿಎಂ

First Published 30, Mar 2018, 9:42 AM IST
CM Meet Jayanti at Hospital
Highlights

ಜಯಂತಿ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಪುತ್ರ ಕೃಷ್ಣ ಕುಮಾರ್, ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿನ್ನೆಯಿಂದ ಮೆದುವಾದ ಆಹಾರ ಸೇವಿಸುತ್ತಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ತೆಗೆದು ಅಬ್ಸರ್ವೇಶನ್‌ನಲ್ಲಿ ಇಡಲಾಗಿದೆ.

ಬೆಂಗಳೂರು(ಮಾ.30): ಅಸ್ತಮಾ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಗರದ ವಿಕ್ರಂ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬೇಗ ಗುಣಮುಖರಾಗುವಂತೆ ಆಶಿಸಿದರು. ಬಳಿಕ ಜಯಂತಿ ಅವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಜಯಂತಿ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ ಪುತ್ರ ಕೃಷ್ಣ ಕುಮಾರ್, ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿನ್ನೆಯಿಂದ ಮೆದುವಾದ ಆಹಾರ ಸೇವಿಸುತ್ತಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ತೆಗೆದು ಅಬ್ಸರ್ವೇಶನ್‌ನಲ್ಲಿ ಇಡಲಾಗಿದೆ.

 ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ವಿನಂತಿಸಿಕೊಂಡರು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ಜಯಂತಿ ಅವರ ಆರೋಗ್ಯ ವಿಚಾರಿಸಿದರು.

loader