ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನಸಭೆ  ಸಫಲವಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿ ತಿದ್ದುಪಡಿ ತರಲು ಸರ್ಕಾರ ಸಮ್ಮತಿ ಸೂಚಿಸಿದೆ. ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ನಿಯಮ ಸಡಿಲಿಸುವ ವಿಷಯದಲ್ಲಿ ಮಾತ್ರ ಸರ್ಕಾರದ ಬಿಗಿಪಟ್ಟು ಹಿಡಿದಿದೆ.  ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಮುನ್ನ ಮತ್ತೊಮ್ಮೆ ಐಎಂಎ ಪಧಾಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಬೆಳಗಾವಿ (ನ.13): ಮುಷ್ಕರ ನಿರತ ವೈದ್ಯರೊಂದಿಗೆ ಸಿಎಂ ಸಂಧಾನಸಭೆ ಸಫಲವಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದಲ್ಲಿ ತಿದ್ದುಪಡಿ ತರಲು ಸರ್ಕಾರ ಸಮ್ಮತಿ ಸೂಚಿಸಿದೆ. ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ನಿಯಮ ಸಡಿಲಿಸುವ ವಿಷಯದಲ್ಲಿ ಮಾತ್ರ ಸರ್ಕಾರದ ಬಿಗಿಪಟ್ಟು ಹಿಡಿದಿದೆ. ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಮುನ್ನ ಮತ್ತೊಮ್ಮೆ ಐಎಂಎ ಪಧಾಧಿಕಾರಿಗಳೊಂದಿಗೆ ಚರ್ಚಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಕಾರ್ಯಕಾರಿ ಸಮಿತಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಐಎಂಎ ಅಧ್ಯಕ್ಷ ಡಾ.ರವೀಂದ್ರ ಹೇಳಿದ್ದಾರೆ.

ತಕ್ಷಣ ಮುಷ್ಕರ ಕೈ ಬಿಡುವಂತೆ ವೈದ್ಯರಿಗೆ ಮನವಿ ಮಾಡುತ್ತೇನೆ. ವಿಧೇಯಕ ಮಂಡನೆಗೆ ಮೊದಲು ಮತ್ತೊಮ್ಮೆ ಅವರೊಂದಿಗೆ ಚರ್ಚಿಸುತ್ತೇನೆ. ಯಾರೂ ಮುಷ್ಕರ ಮಾಡಬೇಡಿ ಬೆಂಗಳೂರಿಗೆ ವಾಪಸ್ ಹೋಗಿ ಎಂದು ಮನವಿ ಮಾಡಿರುವುದಾಗಿ ಸಿಎಂ ಹೇಳಿದ್ದಾರೆ.