ಪ್ರತಿಭಟನಾ ಸ್ಥಳಕ್ಕೆ ಕುಡಿಯವ ನೀರು, ಆ್ಯಂಬುಲೆನ್ಸ್, ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸಚಿವೆ ಉಮಾಶ್ರೀಯವರಿಗೆ ಸಿಎಂ ಸೂಚನೆ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನಿಯೋಜಸಲು ತಿಳಿಸಿದ್ದಾರೆ.

ಬೆಂಗಳೂರು(ಮಾ.23): ತಮ್ಮ ಹಲವು ಬೇಡಿಕೆಗಳಿಗಾಗಿ ಕಳೆದ 2 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಸಂಬಂಧಿಸಿದಂತೆ ನಾಳೆ ಕಾರ್ಯಕರ್ತೆಯರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಇಂದು ಸಹ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಜೊತೆ ಮಾತೆಕತೆ ನಡೆಸಿ ಬೇಡಿಕೆ ಈಡೇರಿಕೆಗೆ ಭರವಸೆ ನೀಡಿದ್ದರು. ಆದರೆ ತಕ್ಷಣವೇ ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದರಿಂದ ಮಾತುಕತೆ ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಕುಡಿಯವ ನೀರು, ಆ್ಯಂಬುಲೆನ್ಸ್, ಸಂಚಾರಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸಚಿವೆ ಉಮಾಶ್ರೀಯವರಿಗೆ ಸಿಎಂ ಸೂಚನೆ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನಿಯೋಜಸಲು ತಿಳಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರು ಭೇಟಿ ನೀಡಿದ್ದು,ಸರ್ಕಾರ ಕೂಡಲೇ ಕಾರ್ಯಕರ್ತೆಯರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ವೇಯನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಬಂದಿರುವ 10 ಸಾವಿರಕ್ಕೂ ಅಂಗನವಾಡಿ ಕಾರ್ಯಕರ್ತೆಯರು ನಿನ್ನೆಯಿಂದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.