ನವದೆಹಲಿ (ಸೆ.22): ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿಯನ್ನು ಭೇಟಿ ಮಾಡಿದರು.
ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಇಂಧನ ಸಚಿವ ಡಿ ಕೆ ಶಿವಕುಮಾರ್ ಹಾಗೂ ಉನ್ನತ ಅಧಿಕಾರಿಗಳು ಜೊತೆಗಿದ್ದರು.
ನಿನ್ನೆ ನಡೆದ ಬೆಳವಣಿಗೆಗಳ ಬಗ್ಗೆ, ನೀರು ನಿಲ್ಲಿಸಿರುವುದರ ಬಗ್ಗೆ ಉಮಾಭಾರತಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ಇದರ ಜೊತೆಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಯಾಕೆ ಬೇಡ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.
