ಗೌರಿ-ಗಣೇಶ, ಬಕ್ರೀದ್ ಹಬ್ಬ ಏಕಕಾಲದಲ್ಲಿ ಆಚರಿಸುವುದರಿಂದ ಶಾಂತಿ ಕದಡಬಹುದಾದ ಸಮಾಜ ಘಾತಕ ವ್ಯಕ್ತಿಗಳನ್ನು ಗುರುತಿಸಬೇಕು. ಅವರ ಚಲನವಲನದ ಮೇಲೆ ನಿಗಾ ಇಡಬೇಕು. ಅಗತ್ಯವಾದರೆ ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು.ಹಬ್ಬದ ಆಚರಣೆ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು. ತಮ್ಮ ಅಧೀನದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಮೇಲಿರುವಂತೆ ನೋಡಿಕೊಳ್ಳಬೇಕು.

ಬೆಂಗಳೂರು(ಆ.21): ಗೌರಿ-ಗಣೇಶ ಮತ್ತು ಬಕ್ರೀದ್ ಹಬ್ಬ ಏಕಕಾಲಕ್ಕೆ ಬಂದಿದ್ದು ಬಿಗಿ ಬಂದೋಬಸ್ತ್ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಣ್ಣ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನ ಮಾಡಬಹುದು.ಅಂತಹ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು.ಗಣಪತಿ ಪ್ರತಿಷ್ಠಾಪನೆ, ಮರವಣಿಗೆ, ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು' ಎಂದಿದ್ದಾರೆ.

ಗೌರಿ-ಗಣೇಶ, ಬಕ್ರೀದ್ ಹಬ್ಬ ಏಕಕಾಲದಲ್ಲಿ ಆಚರಿಸುವುದರಿಂದ ಶಾಂತಿ ಕದಡಬಹುದಾದ ಸಮಾಜ ಘಾತಕ ವ್ಯಕ್ತಿಗಳನ್ನು ಗುರುತಿಸಬೇಕು. ಅವರ ಚಲನವಲನದ ಮೇಲೆ ನಿಗಾ ಇಡಬೇಕು. ಅಗತ್ಯವಾದರೆ ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು.ಹಬ್ಬದ ಆಚರಣೆ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು. ತಮ್ಮ ಅಧೀನದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಮೇಲಿರುವಂತೆ ನೋಡಿಕೊಳ್ಳಬೇಕು. ಆಯಾ ಜಿಲ್ಲೆಯ ಕಮೀಷನರೇಟ್ ಉಸ್ತುವಾರಿ ಹೊಂದಿರುವ ಅಧಿಕಾರಿಗಳು ಆಗಾಗ ಮೇಲ್ವಿಚಾರಣೆ ನಡೆಸಬೇಕು.ಎರಡೂ ಹಬ್ಬಗಳು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು' ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜೀವರಕ್ಷಕ ಸಾಧನಗಳು ಇರಬೇಕು

ಗಣಪತಿ ವಿಸರ್ಜನೆ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು.ಕೆರೆ, ನದಿಯಲ್ಲಿ ಗಣಪತಿ ವಿಸರ್ಜಿಸುವಾಗ ಜೀವರಕ್ಷಕ ಸಾಧನಗಳು ಇರಬೇಕು.ಹಬ್ಬದ ವೇಳೆ ಪೊಲೀಸ್ ಗಸ್ತು ಸಹ ಬಿಗಿಯಾಗಿರಬೇಕು.ಮತೀಯ ಶಕ್ತಿಗಳ ಮೇಲೂ ಕಣ್ಣಿಡಬೇಕು. ಎಲ್ಲೆಡೆ ಶಾಂತಿ ಸಭೆಗಳನ್ನು ನಡೆಸಬೇಕು.ಉಸ್ತುವಾರಿ ಎಡಿಜಿಪಿಗಳು ತಮಗೆ ನಿಗದಿಪಡಿಸಿರುವ ಜಿಲ್ಲೆಗಳಿಗೆ ಭೇಟಿ ಕೊಡಬೇಕು ಎಂದಿದ್ದಾರೆ.