ಹೊನ್ನಾವರ ಗಲಾಟೆಗೆ ಸಂಬಂಧಿಸಿ ತಾಕತ್ತಿದ್ದರೆ ತಮ್ಮನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಪ್ಪು ಮಾಡಿದರೆ ಅವರನ್ನು ಪೊಲೀಸರು ಬಂಧಿಸುತ್ತಾರೆ, ಹೊರತು ನಾವಲ್ಲ ಎಂದು ಹೇಳಿದ್ದಾರೆ.

ಹಾವೇರಿ (ಡಿ.25): ಹೊನ್ನಾವರ ಗಲಾಟೆಗೆ ಸಂಬಂಧಿಸಿ ತಾಕತ್ತಿದ್ದರೆ ತಮ್ಮನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಪ್ಪು ಮಾಡಿದರೆ ಅವರನ್ನು ಪೊಲೀಸರು ಬಂಧಿಸುತ್ತಾರೆ, ಹೊರತು ನಾವಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಖಾಸುಮ್ಮನೇ ಯಾರನ್ನೂ ಬಂಧಿಸುವುದಿಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಿದೆ ಎಂದರು ಸೂಚ್ಯವಾಗಿ ತಿಳಿಸಿದರು.