Asianet Suvarna News Asianet Suvarna News

ಸರ್ಕಾರದ ವಿರುದ್ಧ ಐಪಿಎಸ್ ಬಂಡಾಯ ಸರಿಯಾ? ಸಿಎಂ ಗರಂ

ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಧಿಕಾರಿಗಳ  ಮೇಲಿನ ಹಲ್ಲೆ, ಪದೇಪದೇ ವರ್ಗಾವಣೆ ಸೇರಿದಂತೆ ಹಲವು ಘಟನೆಗಳ ಬಗ್ಗೆ ಐಪಿಎಸ್ ಅಧಿಕಾರಿಗಳ ಸಂಘ  ತೀವ್ರ ಅಸಮಾಧಾನ ಹೊರಹಾಕಿದೆ.

CM Siddaramaiah  Anger on IPS Officer

ಬೆಂಗಳೂರು (ಮಾ. 12): ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಧಿಕಾರಿಗಳ  ಮೇಲಿನ ಹಲ್ಲೆ, ಪದೇಪದೇ ವರ್ಗಾವಣೆ ಸೇರಿದಂತೆ ಹಲವು ಘಟನೆಗಳ ಬಗ್ಗೆ ಐಪಿಎಸ್ ಅಧಿಕಾರಿಗಳ ಸಂಘ  ತೀವ್ರ ಅಸಮಾಧಾನ ಹೊರಹಾಕಿದೆ.

ಈ ಸಂಬಂಧ ಸಂಘದ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಸ್  ಅಧಿಕಾರಿ ಡಾ.ರಾಜ್‌ವೀರ್ ಪ್ರತಾಪ್ ಶರ್ಮಾ ಅವರು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ  ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ  ಇಂದು ಬೆಳಿಗ್ಗೆ ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.  ನಿನ್ನೆ ತಡರಾತ್ರಿಯೂ ಸಿಎಂ ಸಭೆ ನಡೆಸಿದ್ದರು. 

ಇಂದು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ  ಗೃಹ ಸಚಿವ ರಾಮಲಿಂಗಾರೆಡ್ಡಿ, ಡಿಜಿಐಜಿಪಿ ನೀಲಮಣಿರಾಜು, ಸರ್ಕಾರದ ಮುಖ್ಯಕಾರ್ಯದರ್ಶ ರತ್ನಪ್ರಭ, ಗೃಹ ಇಲಾಖೆ ಕಾರ್ಯದರ್ಶಿ ಭಾಗಿಯಾಗಿದ್ದಾರೆ.  ಸಭೆಯಲ್ಲಿ ಐಪಿಎಸ್ ಅಧಿಕಾರಿಗಳ ನಡೆಗೆ ಮುಖ್ಯಮಂತ್ರಿ ಗರಂ ಆಗಿದ್ದಾರೆ.  ಸರ್ಕಾರದ ವಿರುದ್ಧ ಐಪಿಎಸ್ ಬಂಡಾಯ ಸರಿಯಾ..? ನಿಮ್ಮ‌ ಸಮಸ್ಯೆಗಳು ಸರ್ಕಾರದ ಗಮನಕ್ಕೆ ತರುವ ರೀತಿ ಇದಾ..?  ಪತ್ರಬರೆದವರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಗೃಹಸಚಿವರು ಮತ್ತು ಡಿಜಿಐಜಿಪಿಗೆ ಸೂಚನೆ ನೀಡಿದ್ದಾರೆ. ಮತ್ತೊಮ್ಮೆ ಇಂಥ ಪ್ರಕರಣ ಮರುಕಳಿಸಬಾರದೆಂದು ಎಚ್ಚರಿಕೆ ನೀಡಿದ್ದಾರೆ. 

Follow Us:
Download App:
  • android
  • ios