ಅಕ್ಟೋಬರ್ 21ಕ್ಕೆ ಮೂರು ರಾಜ್ಯಗಳ ಸಿಎಂ ಸಭೆ ನಡೆಯಲಿರುವುದರಿಂದ, ಸಿದ್ದರಾಮಯ್ ರಾಜ್ಯದ ಯ ಎಲ್ಲಾ ಪಕ್ಷಗಳ ಅಭಿಪ್ರಾಯ ಪಡೆಯಲಿದ್ದಾರೆ.

ಬೆಂಗಳೂರು (ಅ.19): ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವ ಪಕ್ಷದ ನಾಯಕರ ಸಭೆ ಕರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಕ್ಟೋಬರ್ 21 ರಂದು ಮುಂಬೈನಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಹಿನ್ನೆಲೆಯಲ್ಲಿ ರಾಜ್ಯದ ನಿಲುವು ಚರ್ಚಿಸಲು ಸಿಎಂ ಸಭೆ ಕರೆದಿದ್ದು, ಮಹತ್ವ ಪಡೆದುಕೊಂಡಿದೆ.

ಸಂಜೆ 6 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ನಡೆಯಲಿರೋ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರು, ಸಂಸದರು ಹಾಗೂ ಧಾರವಾಡ, ಬೆಳಗಾವಿ, ಗದಗ್ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ.

ಅಕ್ಟೋಬರ್ 21 ರಂದು ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಗೋವಾ ಮತ್ತು ಕರ್ನಾಟಕ ಸೇರಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.

ಇದಕ್ಕೂ ಮುನ್ನ ಸಿಎಂ ಇವತ್ತು ಸರ್ವಪಕ್ಷಗಳ ಸಭೆ ನಡೆಸುತ್ತಿದ್ದು, ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಸಿಎಂ ಅಭಿಪ್ರಾಯ ಪಡೆಯಲಿದ್ದಾರೆ.