ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಬಳ್ಳಾರಿ: ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬಳ್ಳಾರಿ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಧನಾ ಸಮಾವೇಶ ಮತ್ತು ₹2995 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಂಗಳವಾರ ಅವರು ಮಾತನಾಡಿದರು.
