ಮುಂದಿನ ಡಿಸೆಂಬರ್ ವೇಳೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭ ಮಾಡುವುದಾಗಿ ಹೇಳಿರುವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕ್ಯಾಂಟೀನ್ ತೆರೆಯುವ ಸುಳಿವು ನೀಡಿದ್ದಾರೆ.

ಕೋಲಾರ: ಮುಂದಿನ ಡಿಸೆಂಬರ್ ವೇಳೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭ ಮಾಡುವುದಾಗಿ ಹೇಳಿರುವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕ್ಯಾಂಟೀನ್ ತೆರೆಯುವ ಸುಳಿವು ನೀಡಿದ್ದಾರೆ.

ನಗರದ ಹೊರವಲಯದ ನೂತನ ಜಿಲ್ಲಾಧಿಕಾರಿ ಭವನ ಉದ್ಘಾಟನೆ ಮತ್ತು ಇತರೆ ₹584 ಕೋಟಿ ವೆಚ್ಚದ 24 ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಮುಂದಿನ ಡಿಸೆಂಬರ್ ಹೊತ್ತಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂದಿರಾ ಕ್ಯಾಂಟಿನ್ ತೆರೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕ್ಯಾಂಟೀನ್ ಆರಂಭಿಸುತ್ತೇವೆ ಎಂದರು.