ಸಿದ್ದರಾಮಯ್ಯಗೆ ಮೈಸೂರು ವಿವಿ ಗೌರವ ಡಾಕ್ಟರೇಟ್..?

First Published 20, Jan 2018, 1:07 PM IST
CM Siddaramaiah Name Proposed for Honorary Doctorate
Highlights

ಮೈಸೂರು ವಿವಿ ಗೌರವ ಡಾಕ್ಟರೆಟ್‌'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮೈಸೂರು ತಾಪಂ ಸದಸ್ಯ, ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ್ ಅವರು ಗುರುವಾರ ನಡೆದ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಮೈಸೂರು(ಜ.20): ಮೈಸೂರು ವಿಶ್ವವಿದ್ಯಾಲಯದ 98ನೇ ವರ್ಷದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ನೀಡಲು ಹಲವರ ಹೆಸರುಪ್ರಸ್ತಾಪಿಸಲಾಗಿದ್ದು, ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್, ಸಾಲು ಮರದ ತಿಮ್ಮಕ್ಕ ಅವರ ಹೆಸರೂಸೇರಿವೆ.

ಮೈಸೂರು ವಿವಿ ಗೌರವ ಡಾಕ್ಟರೆಟ್‌'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಮೈಸೂರು ತಾಪಂ ಸದಸ್ಯ, ಸಿಂಡಿಕೇಟ್ ಸದಸ್ಯ ಎಂ.ಎಸ್.ಎಸ್.ಕುಮಾರ್ ಅವರು ಗುರುವಾರ ನಡೆದ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ಕಳೆದ ಬಾರಿಯೇ ಬೆಂಗಳೂರು ವಿಶ್ವವಿದ್ಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆದರೆ, ಆ ಮನವಿಯನ್ನು ಸಿದ್ದರಾಮಯ್ಯ ತಿರಸ್ಕರಿಸಿದ್ದರು.

loader