ಬೆಂಗಳೂರು(ಸೆ.25): ಕಾವೇರಿಕೊಳ್ಳದ ವಾಸ್ತವ ಸ್ಥಿತಿಯನ್ನು ಅರಿಯಲು ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಜಲಾಶಯಗಳಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಯಗಚಿ ಮತ್ತು ಹೇಮಾವತಿ ಜಲಾಶಯಗಳ ವೀಕ್ಷಣೆ ಮಾಡಲಿರುವ ಸಿಎಂ, ನಾಳೆ ಹಾರಂಗಿ ಹಾಗೂ ಕೆಆರ್​ಎಸ್ ಜಲಾಶಯಗಳಿಗೆ ಭೇಟಿ ನೀಡಲಿದ್ದಾರೆ. ಇನ್ನು ಸಿಎಂ ಜೊತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಕೂಡಾ ಭಾಗಿಯಾಗಲಿದ್ದಾರೆ.

ಮಾಧ್ಯಮ ಮತ್ತು ಜನಪ್ರತಿನಿಧಿಗಳಿಗೆ ವಸ್ತುಸ್ಥಿತಿಯನ್ನು ತಿಳಿಸಲು ಸಿಎಂ ಈ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ.