Asianet Suvarna News Asianet Suvarna News

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ,  ಬಿಜೆಪಿ ಕೋಮುವಾದಿ ಪಕ್ಷ: ಸಿಎಂ ಲೇವಡಿ

ಸಿಎಂ ಸಿದ್ದರಾಮಯ್ಯ  ಜನಾಶಿರ್ವಾದ ಯಾತ್ರೆ ಸಕ್ಸಸ್ ಆದ ಖುಷಿಯಲ್ಲಿದ್ದಾರೆ.   ಯಾತ್ರೆಗೆ ಆಗಮಿಸಿದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. 

CM Siddaramaiah Ridicule JDS and BJP

ಬೆಂಗಳೂರು (ಮಾ.26): ಸಿಎಂ ಸಿದ್ದರಾಮಯ್ಯ  ಜನಾಶಿರ್ವಾದ ಯಾತ್ರೆ ಸಕ್ಸಸ್ ಆದ ಖುಷಿಯಲ್ಲಿದ್ದಾರೆ.   ಯಾತ್ರೆಗೆ ಆಗಮಿಸಿದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ. 
ಜನಾಶಿರ್ವಾದ ಯಾತ್ರೆಗೆ ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ.  ಅಭ್ಯರ್ಥಿಗಳ ಮೊದಲ ಹಂತದ ಶಿಫಾರಸು ಸಭೆ ನಡೆಸುತ್ತೇವೆ.  ಅಂತಿಮವಾಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಾರೆ ಎಂದು ಸಿಎಂ ಮೈಸೂರಿನಲ್ಲಿಂದು ಹೇಳಿದ್ದಾರೆ. 
ಜೆಡಿಎಸ್ ಪಕ್ಷ ಜ್ಯಾತ್ಯಾತೀತ ಪಕ್ಷವಾಗಿ ಉಳಿದಿಲ್ಲ.  ಈ ಹಿಂದೆ ಬಿಜೆಪಿ ಜೊತೆ ಕೈ ಜೋಡಿಸಿ ರಾಜ್ಯ ಸರ್ಕಾರ ನಡೆಸಿದೆ.  ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸ್ತಾರೆ ಎಂದು  ರಾಹುಲ್ ಗಾಂಧಿ ಹೇಳಿಕೆಯನ್ನು  ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. 

ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ,  ಬಿಜೆಪಿ ಕೋಮುವಾದಿ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.  ರಾಹುಲ್ ಗಾಂಧಿ  ಮಲೆನಾಡು ಭಾಗದಲ್ಲಿ ಏಪ್ರಿಲ್ ಮೊದಲನೇ ವಾರ   ಮೂರನೇ ಹಂತದ ಜನಾಶೀರ್ವಾದ ಯಾತ್ರೆ  ಪ್ರವಾಸ ಕೈಗೊಳ್ಳಲಿದ್ದಾರೆ.  ಏಪ್ರಿಲ್ 6 ಕ್ಕೆ ಬೆಂಗಳೂರಿನಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಎಂದು  ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Follow Us:
Download App:
  • android
  • ios