DySP ಗಣಪತಿ ನಿಗೂಢ ಸಾವು ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ಧರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು(ಆ.24): DySP ಗಣಪತಿ ನಿಗೂಢ ಸಾವು ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ಧರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಸಿಬಿ, ಸಿಐಡಿಯನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಉಸಿರುಗಟ್ಟಿಸುವ ವಾತಾವರಣ ಇದೆ. ಸರ್ಕಾರ ತನಿಖೆಯ ಹೆಸರಲ್ಲಿ ನಾಟಕ ಮಾಡಿದೆ. ಸಚಿವರವನ್ನು ರಕ್ಷಿಸಲು ಸರಿಯಾಗಿ ತನಿಖೆ ನಡೆಸಿಲ್ಲ. ಗಣಪತಿ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಿಕೊಡಬೇಕು ಎಂಬ ಹೇಳಿಕೆ ನೀಡಿದ್ದಾರೆ.
ಗಣಪತಿ ಸಾವಿನ ತನಿಖೆಯಲ್ಲಿ ಸರ್ಕಾರ ಸತ್ಯ ಮರೆಮಾಚಿದೆ. ಸಿಐಡಿಯ ವಿಶ್ವಾಸರ್ಹತೆಯ ಪ್ರಶ್ನೆ ಈಗ ಎದುರಾಗಿದೆ. ಆರೋಪ ಕೇಳಿ ಬಂದಿರುವ ಸಚಿವರು, ಅಧಿಕಾರಿಗಳನ್ನು ರಕ್ಷಿಸಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದೂ ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.
