ಈ ಸಲವೂ ಜೆಡಿಎಸ್‌ ಬಿಜೆಪಿ ಜತೆ ಕೈಜೋಡಿಸುತ್ತೆ: ಸಿದ್ದು

First Published 27, Mar 2018, 9:30 AM IST
CM Siddaramaiah Slams JDS Leaders
Highlights

ಜೆಡಿಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್‌ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಜೆಡಿಎಸ್‌ನವರು ಬಿಜೆಪಿ ಜತೆ ಕೈಜೋಡಿಸಿ ಸರ್ಕಾರ ನಡೆಸಿದ್ದರು. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ. ಜೆಡಿಎಸ್‌ ಒಂದು ಅವಕಾಶವಾದಿ ಪಕ್ಷ ಎಂದು ಹರಿಹಾಯ್ದಿದ್ದಾರೆ.

ಮೈಸೂರು : ಜೆಡಿಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್‌ ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ. ಈ ಹಿಂದೆ ಜೆಡಿಎಸ್‌ನವರು ಬಿಜೆಪಿ ಜತೆ ಕೈಜೋಡಿಸಿ ಸರ್ಕಾರ ನಡೆಸಿದ್ದರು. ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತಾರೆ. ಜೆಡಿಎಸ್‌ ಒಂದು ಅವಕಾಶವಾದಿ ಪಕ್ಷ ಎಂದು ಹರಿಹಾಯ್ದಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಎಚ್‌.ಡಿ. ದೇವೇಗೌಡರು ನನ್ನ ಶವದ ಮೇಲೆ ಸರ್ಕಾರ ರಚಿಸಿ ಎಂದಿದ್ದರು. ಇಪ್ಪತ್ತು ತಿಂಗಳು ಅಧಿಕಾರ ಅನುಭವಿಸಿದ ಬಳಿಕ ನನ್ನ ಮಗ ಪಕ್ಷ ಉಳಿಸುವ ಕೆಲಸ ಮಾಡಿದ್ದಾನೆ ಎಂದು ಅವರೇ ಹೇಳಿದರು. ಈಗ ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಜನಾರ್ಶೀವಾದ ಯಾತ್ರೆ ಹಾಗೂ ಸಮಾವೇಶಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ. ಮುಂದಿನ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಹಂತದ ಶಿಫಾರಸು ಸಭೆ ನಡೆಸುತ್ತೇವೆ. ಅಂತಿಮವಾಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡಲಿದೆ. ರಾಹುಲ… ಗಾಂಧಿ ಮಲೆನಾಡು ಭಾಗದಲ್ಲಿ ಏಪ್ರಿಲ… ಮೊದಲನೇ ವಾರ ಜನಾಶೀರ್ವಾದ ಪ್ರವಾಸ ಕೈಗೊಳ್ಳಲಿದ್ದಾರೆ. ಏ.6ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

loader