ಟ್ವಿಟರ್​ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು,ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಾರಣದಿಂದಾಗಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿಲ್ಲ ಅಂತ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ತೀವ್ರ ವಿರೋಧದ ನಡುವೆಯೂ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದೇ ತರುವೆ ಎಂದು ಪಣತೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ಇದೀಗ, ಕಾಯ್ದೆ ಜಾರಿಯಿಂದ ಹಿಂದೆ ಸರಿದಿರುವುದು ಪ್ರಗತಿಪರರ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು(ಡಿ.21): ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಗೆ ಸರ್ಕಾರ ಎಳ್ಳುನೀರು ಬಿಟ್ಟಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಕಾಯ್ದೆ ಜಾರಿಗೆ ತರಲಾಗುತ್ತಿಲ್ಲ ಅಂತ ಘೋಷಿಸಿದ್ದಾರೆ.

ಟ್ವಿಟರ್​ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು,ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕಾರಣದಿಂದಾಗಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿಲ್ಲ ಅಂತ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ತೀವ್ರ ವಿರೋಧದ ನಡುವೆಯೂ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದೇ ತರುವೆ ಎಂದು ಪಣತೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ಇದೀಗ, ಕಾಯ್ದೆ ಜಾರಿಯಿಂದ ಹಿಂದೆ ಸರಿದಿರುವುದು ಪ್ರಗತಿಪರರ ಕೆಂಗಣ್ಣಿಗೆ ಗುರಿಯಾಗಿದೆ.

ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಗೆ ಜಾರಿ ಅಸಾಧ್ಯ ಎನ್ನುವ ಮಾತನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ಪರೋಕ್ಷವಾಗಿ ಹೇಳಿದ್ದರು. ಬೆಂಗಳೂರಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ,' ವಿಜ್ಞಾನ ಇಷ್ಟೆಲ್ಲ ಮುಂದುವರೆದಿದ್ದರೂ ಇನ್ನೂ ಅಂಧಶ್ರದ್ಧೆ ಉಳಿದುಕೊಂಡಿದೆ. ಇದನ್ನು ಹೋಗಲಾಡಿಸಲು ಮುಂದಾದರೆ ಪಟ್ಟಭದ್ರ ಹಿತಾಸಕ್ತಿಗಳಿಂದ ದೊಡ್ಡ ವಿರೋಧ ಬರುತ್ತದೆ' ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು. ಆದರೆ ಇಂದು, ಕಾಯ್ದೆ ಜಾರಿ ಸಾಧ್ಯವಾಗುತ್ತಿಲ್ಲ ಅನ್ನೋದನ್ನ ಸ್ಪಷ್ಟಪಡಿಸಿದ್ದಾರೆ.

Scroll to load tweet…