ಯಡಿಯೂರಪ್ಪ ಅವರ ಅಪ್ಪನ ಆಣೆಗೂ ಮುಖ್ಯಮಂತ್ರಿ ಆಗೋದಿಲ್ಲ, ಅವರು ಮೊದಲು ಹಗಲುಗನಸು ಕಾಣೋದನ್ನು ಬಿಡಲಿ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಈಶ್ವರಪ್ಪ ಮೊದಲು ಪರಿವರ್ತನೆಯಾಗಲಿ. ಅಮಿತ್ ಶಾ, ನರೇಂದ್ರ ಮೋದಿ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕೋಲಾರ(ಡಿ.30): ಜೈಲಿಗೆ ಹೋಗಿ ಬಂದವರಿಗೆ ಮಾನ ಮರ್ಯಾದೆ ಇಲ್ಲದೆ ಜನರ ಮುಂದೆ ಪರಿವರ್ತನಾ ಯಾತ್ರೆ ನಡೆಸುತ್ತಿದ್ದಾರೆ. ಹೆಗಲ ಮೇಲೆ ಹಸಿರು ಶಾಲು ಹಾಕಿಕೊಂಡು ರೈತರನ್ನೇ ಕೊಂದು ಹಾಕಿದರು. ಯಡಿಯೂರಪ್ಪಗೆ ಎರಡು ನಾಲಿಗೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಸ್'ವೈ ಹರಿಹಾಯ್ದಿದ್ದಾರೆ.

ಯಡಿಯೂರಪ್ಪ ಅವರ ಅಪ್ಪನ ಆಣೆಗೂ ಮುಖ್ಯಮಂತ್ರಿ ಆಗೋದಿಲ್ಲ, ಅವರು ಮೊದಲು ಹಗಲುಗನಸು ಕಾಣೋದನ್ನು ಬಿಡಲಿ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಈಶ್ವರಪ್ಪ ಮೊದಲು ಪರಿವರ್ತನೆಯಾಗಲಿ. ಅಮಿತ್ ಶಾ, ನರೇಂದ್ರ ಮೋದಿ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಹದಾಯಿ ವಿಚಾರದಲ್ಲಿ ಮೋದಿ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಹಾಗೆಯೇ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿಯವರು ಲೋಕಸಭೆಗೆ ಮುತ್ತಿಗೆ ಹಾಕಲಿ ಎಂದು ಸವಾಲು ಹಾಕಿದರು.