ಬೆಂಗಳೂರು (ಅ.04): ಕಾವೇರಿ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಮಂತ್ರಿ ದೇವೇಗೌಡರು ಹಾಗೂ ರಾಜ್ಯವನ್ನು ‌ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾವೇರಿ ನದಿ ನೀರಿನ ವಿಚಾರದಲ್ಲಿ ನೀಡಿದ ನೆರವು ಹಾಗೂ ಸಹಕಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ಜೊತೆಗೆ ಸಹಕರಿಸಿದ ಎಲ್ಲ ಪಕ್ಷಗಳಿಗೂ ಧನ್ಯವಾದಗಳು ಎಂದಿದ್ದಾರೆ.