ಹೃದಯ ಶಸ್ತ್ರಚಿಕಿತ್ಸೆ ಒಳಗಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಇಂದು ಮುಖ್ಯ ಮಂತ್ರಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆ ಒಳಗಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಇಂದು ಮುಖ್ಯ ಮಂತ್ರಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಅಪೊಲೊ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಕಳೆದ ಸೆ.23 ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಆಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಹತ್ತು ವರ್ಷಗಳ ಮುಂಚೆ ಅಳವಡಿಸಲಾಗಿದ್ದ ಟಿಶ್ಯೂವಾಲ್ವ್ ಅನ್ನು ಬದಲಾಯಿಸಲು ವೈದ್ಯರು ಸೂಚಿಸಿರುವ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.