ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುದ್ದಿ ಕೇಳಿ ಆಘಾತವಾಗಿದೆ. ಇದೊಂದು ಹೇಯ ಕೃತ್ಯ.ಇಡೀ ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುದ್ದಿ ಕೇಳಿ ಆಘಾತವಾಗಿದೆ. ಇದೊಂದು ಹೇಯ ಕೃತ್ಯ.ಇಡೀ ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.
ಪೊಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ, ದುಷ್ಕರ್ಮಿಗಳ ಪತ್ತೆಗಾಗಿ 3 ತಂಡಗಳನ್ನು ರಚಿಸಲಾಗಿದೆ. ತನಿಖೆ ಆರಂಭವಾಗಿದೆ. ಆದಷ್ಟು ಬೇಗ ಹಂತಕರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಅವರಿಗೆ ಜೀವ ಬೆದರಿಕೆ ಇದೆ ಎಂದು ನನಗೆ ಮಾಹಿತಿ ಇರಲಿಲ್ಲ. ರಕ್ಷಣೆಯನ್ನು ಕೂಡಾ ಕೋರಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮಾನವೀಯತೆ ಇರುವವರು ಇಂತಹ ಕೃತ್ಯ ಎಂದಿಗೂ ಮಾಡಲ್ಲ, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ಸರ್ಕಾರ ಬಂದ ಮೇಲೆ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತಂದಿದ್ದಾರೆ, ಎಂದು ಸಿಎಂ ಹೇಳಿದ್ದಾರೆ.
