ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಅಭಿವೃದ್ದಿ ಕಾಮಗಾರಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಮೈಸೂರು (ಜ.25): ನಿಮಗೆ ಮಾನ ಮರ್ಯಾದೆ ಇಲ್ಲವಾ? ಸ್ವಾಭಿಮಾನ ಇಲ್ಲವಾ? ಇಂಜಿನಿಯರಿಂಗ್ ಓದಬೇಕಾದ್ರೆ ಏನೂ ಕಲಿಸಿಕೊಟ್ಟಿಲ್ಲವಾ? ಹೀಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು ಸಿಎಂ ಸಿದ್ದರಾಮಯ್ಯ.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಅಭಿವೃದ್ದಿ ಕಾಮಗಾರಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಿಎಂ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕುಡಿಯುವ ನೀರಿನ ಬಗ್ಗೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿ ಹಾಗೂ ಸಮರ್ಪಕ ನೀರು ಪೂರೈಕೆ ಮಾಡಲು ಸರಿಯಾದ ಕ್ರಮ ಕೈಗೊಳ್ಳದ ಇಂಜಿನಿಯರ್ ರನ್ನು ತರಾಟೆಗೆ ತೆಗೆದುಕೊಂಡರು.
ಈ ತಿಂಗಳ 31ರ ಒಳಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.