ವಲಸೆ ಹೋಗುತ್ತಾರಾ ಸಿಎಂ ಸಿದ್ದರಾಮಯ್ಯ : ಯಾವ ಕ್ಷೇತ್ರದತ್ತ ಸಿಎಂ ಚಿತ್ತ..?

First Published 5, Apr 2018, 7:45 AM IST
CM Siddaramiah Contest From Badami
Highlights

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ವಲಸೆ ಪರ್ವ ಮುಂದುವರಿದಿದೆ.

ಬೆಂಗಳೂರು :  ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ವಲಸೆ ಪರ್ವ ಮುಂದುವರಿದಿದೆ. ಬುಧವಾರವೂ ಹಲವು ರಾಜಕಾರಣಿಗಳು ಪಕ್ಷಾಂತರ ಮಾಡಿದ್ದರೆ, ಇನ್ನು ಕೆಲವರು ಅನ್ಯಪಕ್ಷಗಳಿಗೆ ವಲಸೆ ಹೋಗುವ ಸುಳಿವಿತ್ತಿದ್ದಾರೆ. ಇದೇ ವೇಳೆ, ಪ್ರಮುಖ ಮೂರು ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಲ್ಲಿ ಟಿಕೆಟ್‌ ಬಿಸಿ ಜೋರಾಗಿದೆ. ಈ ಎಲ್ಲ ಬೆಳವಣಿಗೆಗಳ ಸಂಕ್ಷಿಪ್ತ ಚಿತ್ರಣ ಇಂತಿದೆ.

ತಾವು ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದರೂ ಅವರ ಸ್ಪರ್ಧೆ ಬಗ್ಗೆ ಗೊಂದಲ ಮುಂದುವರಿದಿದೆ. ಬಾದಾಮಿ ಅಥವಾ ಬಸವಕಲ್ಯಾಣದಲ್ಲಿ ಸಿದ್ದು ಸ್ಪರ್ಧೆ ಸಂಬಂಧ ಸಮೀಕ್ಷೆ ನಡೆದಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ನಾರಾಯಣ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

loader