ಮಾಂಸಹಾರ ಪ್ರಿಯ ಸಿದ್ದರಾಮಯ್ಯ, ಇದೀಗ ಮೀನು ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ನಿನ್ನೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಧರ್ಮಸ್ಥಳದ ಮಂಜುನಾಥನ ಸನ್ನಿದಿಗೆ ಭೇಟಿ ನೀಡಿದ್ದರು. ಇದಕ್ಕೂ ಮುನ್ನ ಮಾಂಸಾಹಾರ ಸೇವನೆ ಮಾಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
ಬೆಂಗಳೂರು (ಅ.23): ಮಾಂಸಹಾರ ಪ್ರಿಯ ಸಿದ್ದರಾಮಯ್ಯ, ಇದೀಗ ಮೀನು ತಿಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ನಿನ್ನೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಧರ್ಮಸ್ಥಳದ ಮಂಜುನಾಥನ ಸನ್ನಿದಿಗೆ ಭೇಟಿ ನೀಡಿದ್ದರು. ಇದಕ್ಕೂ ಮುನ್ನ ಮಾಂಸಾಹಾರ ಸೇವನೆ ಮಾಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
ಸಿಎಂ ಸಿದ್ದರಾಮಯ್ಯರ ಮೀನೂಟ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮೀನು ತಿಂದು ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಹಲವರ ವಿರೋಧಕ್ಕೆ ಕಾರಣವಾಗಿದೆ. ನಿನ್ನೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು. ತಮ್ಮ ಸರ್ಕಾರದ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ, ದೇವರ ಸನ್ನಿಧಾನಕ್ಕೆ ಭೇಟಿಗೂ ಮುನ್ನ ಸಿಎಂ ಸಿದ್ದರಾಮಯ್ಯ ಮೀನೂಟ ಸೇವಿಸಿದ್ದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
ಹಲವರು ಮೀನು ತಿಂದು ದೇವರ ದರ್ಶನ ಪಡೆದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದು, ದೇವರು ಏನು ಮಾಂಸ ಆಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ಹೇಳಿಲ್ಲ, ಬೇಡರ ಕಣ್ಣಪ್ಪ ಕೂಡ ಶಿವನಿಗೆ ಜಿಂಕೆ ಮಾಂಸ ನೈವೇದ್ಯ ಮಾಡಿದ್ದ, ಮಾಂಸ ಸೇವನೆ ಮಾಡಿ ದೇವಸ್ತಾನಕ್ಕೆ ಹೋಗುವುದು ತಪ್ಪಲ್ಲ ಎಂದಿದ್ದಾರೆ.
ಸಿಎಂ ಅವರ ಈ ನಡೆಗೆ ಬಿಜೆಪಿ ವಿರೋಧಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಸಿಎಂ ಮಾಂಸಾಹಾರ ಸೇವಿಸೆ ದೇವಸ್ಥಾನಕ್ಕೆ ಭೇಟಿ ನೀಡಿದ್ದು ತಪ್ಪು ಎಂದಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಈಗಲಾದರೂ ಸಿಎಂಗೆ ದೇವರ ಮೇಲೆ ನಂಬಿಕೆ ಭಕ್ತಿ ಬಂದಿದೆಯಲ್ಲ, ಅದಕ್ಕೆ ಖುಷಿ ಪಡಬೇಕು ಎಂದು ವ್ಯಂಗ್ಯವಾಡಿದ್ದಾರೆ.
