ನವದೆಹಲಿ (ಸೆ. 20): ತಮಿಳುನಾಡಿಗೆ ಮತ್ತೆ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆ ಚರ್ಚಿಸಿದ್ದಾರೆ.
ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ, ಕಾವೇರಿ ನೀರು ಬಿಡುಗಡೆ ಕುರಿತು ಚರ್ಚಿಸಿದ್ದಾರೆ.
ಕಾವೇರಿ ಕೊಳ್ಳದ ಜಲಾಶಯಗಳ ಈಗಿನ ಸ್ಥಿತಿಗತಿ ನೋಡಿದ್ರೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ. ಹೀಗಾಗಿ ಕಾವೇರಿ ವಿಷಯದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಅಗತ್ಯತೆಯಿದೆ ಎಂದು ಸೋನಿಯಾಗಾಂಧಿಗೆ ವಿವರಿಸಿದ್ದಾರೆ.
ರಾಜ್ಯದ ಜಲಾಶಯಗಳ ಪರಿಸ್ಥಿತಿ ಬಗ್ಗೆ 2 ದಿನಗಳ ಹಿಂದೆಯೂ ಸಿಎಂ ಸಿದ್ದರಾಮಯ್ಯ, ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು
