ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿರುವ ಗೃಹ ಖಾತೆಯನ್ನು ಯಾರಿಗೆ ವಹಿಸಬೇಕು ಎನ್ನುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ.
ಬೆಂಗಳೂರು (ಜೂ.21): ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿರುವ ಗೃಹ ಖಾತೆಯನ್ನು ಯಾರಿಗೆ ವಹಿಸಬೇಕು ಎನ್ನುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ.
ಅಧಿವೇಶನ ಬಳಿಕ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದ ಸಿಎಂ, ಸಂಪುಟ ವಿಸ್ತರಣೆಗೂ ಮುನ್ನ ಗೃಹ ಖಾತೆ ಹಂಚಿಕೆ ಮಾಡಲು ಚಿಂತನೆ ನಡೆಸಿ ಹಾಲಿ ಸಚಿವರಿಗೆ ನೀಡಲು ಮುಂದಾಗಿದ್ದಾರೆ. ಆದರೆ ಗೃಹ ಖಾತೆ ಜವಾಬ್ದಾರಿ ಹೊರಲು ಆ ಹಿರಿಯ ಸಚಿವರು ನಿರಾಕರಿಸುತ್ತಿದ್ದಾರೆ. ಗೃಹ ಖಾತೆ ಹಂಚಿಕೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದ್ದು, ಪರಮೇಶ್ವರ ಅವರನ್ನೇ ಗೃಹ ಮಂತ್ರಿಯಾಗಿ ಮುಂದುವರಿಸಲು ಸಿಎಂ ಒಲವು ತೋರಿಸಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ಗೃಹ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ.
