ದೀಪಕ್ ರಾವ್ ಕೊಲೆ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಲ್ಲದಕ್ಕೂ ಗೃಹ ಸಚಿವರು ರಾಜೀನಾಮೆ ಕೊಡಲು ಆಗುತ್ತಾ? ಎಂದು ಬಿಜೆಪಿ ಆಗ್ರಹಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.   

ಮಂಗಳೂರು (ಜ.04): ದೀಪಕ್ ರಾವ್ ಕೊಲೆ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಲ್ಲದಕ್ಕೂ ಗೃಹ ಸಚಿವರು ರಾಜೀನಾಮೆ ಕೊಡಲು ಆಗುತ್ತಾ? ಎಂದು ಬಿಜೆಪಿ ಆಗ್ರಹಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂತಹ ಘಟನೆ ನಡೆಯಬಾರದಿತ್ತು. ಎಲ್ಲಾ ಜೀವವೂ ಅಮೂಲ್ಯ. ಕೊಲೆಗಡುಕರಿಗೆ ಶಿಕ್ಷೆಯಾಗಬೇಕು. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕೋಮುಗಲಭೆ ಆಗಿದ್ದರೆ ಪರಿಹಾರ ನೀಡಲಾಗುವುದು. ಸಮಾಜದಲ್ಲಿ ಕೋಮು ಗಲಭೆ ನಡೆಯಲು ಬಿಜೆಪಿ ಕಾರಣ. ಅವರೇ ಎಲ್ಲದಕ್ಕೂ ಹುಳಿ ಹಿಂಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ದೀಪಕ್ ಹತ್ಯೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹತ್ಯೆಗೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ವತಿಯಿಂದ ಪರಿಹಾರ ಘೋಷಣೆ ಮಾಡಲಾಗುತ್ತದೆ. 2 ರಾಷ್ಟ್ರೀಯ ಸಂಘವನ್ನು ನಿರ್ಬಂಧಿಸಲು ರಾಜ್ಯಕ್ಕೆ ಆಗಲ್ಲ. ಶರತ್ ಸಾವಿನಲ್ಲೂ ರಾಜಕೀಯ ಮಾಡಿದ್ರು. ಆಗ ಸಂಸದರಾದ ಶೋಭಾ ಕರಂದ್ಲಾಜೆ, ಅನಂತ ಕುಮಾರ್ ಹೆಗಡೆ ಏನ್ ಮಾಡಿದ್ರು? ಹತ್ಯೆ ಸಂಬಂಧ ದೂರು ನೀಡಿದ್ರೂ ಕೇಂದ್ರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಈ ಘಟನೆ ನಾವು ಸಹಿಸಲ್ಲ. ಕುಟುಂಬದ ಕಣ್ಣೀರು ಒರೆಸಿ,ಶಾಂತಿ ಕಾಪಾಡಿ. ರಾಜಕೀಯ ಬೇಡ. ಈ ಹತ್ಯೆ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಒಂದಾಗಬೇಕು. ಕರಾವಳಿ ಭಾಗಕ್ಕೆ ಇದು ಕಪ್ಪು ಚುಕ್ಕೆಯಾಗಬಾರದು ಎಂದು ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.