ಕೊಪ್ಪಳ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಪ್ರವಾಸ ಹಮ್ಮಿಕೊಂಡಿದ್ದಾರೆ. ಕುಷ್ಟಗಿ ಪಟ್ಟಣದಲ್ಲಿ ಕಾಂಗ್ರೆಸ್'ನ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕೊಪ್ಪಳ (ಡಿ.14): ಕೊಪ್ಪಳ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಪ್ರವಾಸ ಹಮ್ಮಿಕೊಂಡಿದ್ದಾರೆ. ಕುಷ್ಟಗಿ ಪಟ್ಟಣದಲ್ಲಿ ಕಾಂಗ್ರೆಸ್'ನ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಆ ನಂತರ ಗಂಗಾವತಿ ತಾಲೂಕಿನ ಕನಕಗಿರಿಯಲ್ಲಿ 357 ಕೋಟಿ ರೂಪಾಯಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೇ, ಕನಕಗಿರಿಯ ಐತಿಹಾಸಿಕ ಲಕ್ಷ್ಮೀ ಕೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿನ ಅರ್ಪಣೆ ಮಾಡಲಿದ್ದಾರೆ. ತದ ನಂತರ ಸಂಜೆ ಗಂಗಾವತಿ ಪಟ್ಣಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮಾರು 230 ಕೋಟಿ ರೂಪಾಯಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ.
