ಕಳೆದ ಸುಮಾರು 20 ದಿನಗಳಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯಾವಕಾಶಕ್ಕೆ ಕಾಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಗೂ ಭೇಟಿ ಅವಕಾಶ ಸಿಕ್ಕಿದೆ. ಡಿ.30 ರಂದು ಸಿಎಂ ಭೇಟಿ ಪ್ರಧಾನಮಂತ್ರಿಗಳ ಕಾರ್ಯಾಲಯ ಸಮಯ ನಿಗದಿಪಡಿಸಿದೆ.

ಬೆಂಗಳೂರು (ಡಿ. 27): ಕಳೆದ ಸುಮಾರು 20 ದಿನಗಳಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯಾವಕಾಶಕ್ಕೆ ಕಾಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಗೂ ಭೇಟಿ ಅವಕಾಶ ಸಿಕ್ಕಿದೆ. ಡಿ.30 ರಂದು ಸಿಎಂ ಭೇಟಿ ಪ್ರಧಾನಮಂತ್ರಿಗಳ ಕಾರ್ಯಾಲಯ ಸಮಯ ನಿಗದಿಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹೆಚ್ಚುವರಿ ನೆರವು ಕೋರಲು ಪ್ರಧಾನಿಗಳ ಭೇಟಿಗೆ ಕಳೆದ ಡಿ.5 ರಿಂದಲೇ ಸಿಎಂ ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದರು. ಅಲ್ಲದೇ ಡಿ.9 ರಂದು ದೆಹಲಿಗೆ ತೆರಳಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿದ ವೇಳೆಯೂ ಪ್ರಧಾನಿ ಭೇಟಿಗೆ ಸಿದ್ದರಾಮಯ್ಯ ಯತ್ನಿಸಿದ್ದರಾದರೂ ಗೃಹ ಸಚಿವ ರಾಜನಾಥ್‌ಸಿಂಗ್ ಅವರ ಭೇಟಿಗೆ ತೃಪ್ತಿಪಟ್ಟು ವಾಪಸ್ ಬಂದಿದ್ದರು. ಈ ವೇಳೆ ಪ್ರಧಾನಿಗಳು ಸಮಯಾವಕಾಶ ನೀಡದ ಕುರಿತಂತೆ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಕುರಿತಂತೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರವೇ ನಡೆದಿತ್ತು.

ಇದೀಗ ಡಿ.30 ರಂದು ಪ್ರಧಾನಿ ಮೋದಿ ಭೇಟಿ ಸಮಯ ನಿಗದಿಯಾಗಿದ್ದು, ಶುಕ್ರವಾರ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ಖಚಿತಪಡಿಸಿವೆ.