ಬೆಂಗಳೂರು(ಸೆ.12): ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ಹಲ್ಲೆಗೆ ಖಂಡಿಸಿರುವ ಮುಖ್ಯಮಂತ್ರಿ ಸಿದ್ಧರಾಯಯ್ಯ, ಈ ಕುರಿತು ಜಯಲಲಿತಾ ಜೊತೆ ಮಾತುಕತೆಗೆ ಮುಂದಾಗಿದ್ದು, ತಮಿಳುನಾಡಿನಲ್ಲಿರುವ ಕನ್ನಡಿಗೆ ರಕ್ಷಣೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. 

ಈ ಕುರಿತು ಸುವರ್ಣ ನ್ಯೂಸ್'ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ಧರಾಯಯ್ಯ, ಈಗಾಗಲೇ ಕನ್ನಡಿಗರ ಮೇಲಿನ ಹಲ್ಲೆಗೆ ಸಂಬಂಧಿಸಿಂತೆ ನಮ್ಮ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ, ತಮಿಳುನಾಡಿನ ಮುಖ್ಯಕಾರ್ಯದರ್ಶಿ ಜೊತೆಯಲ್ಲಿ ಮಾತನಾಡಿರುವುದಾಗಿ ತಿಳಿಸಿದ ಅವರು, ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆ ಕ್ರಮ ತೆಗೆದುಕೊಳ್ಳುವುದಾಗಿ ತಮಿಳುನಾಡು ಸರಕಾರ ತಿಳಿಸಿದ್ದಾರೆ ಎಂದಿದ್ದಾರೆ.

ತಮಿಳುನಾಡಿನಲ್ಲಿ ಕನ್ನಡಿಗರ ಮೇಲಿನ ಹಲ್ಲೆ ಸಂಬಂಧಿಸಿದ್ದಂತೆ ತಮಿಳುನಾಡು ಸಿಎಂ ಜಯಲಲಿತಾಗೆ ಪತ್ರ ಬರೆಯುತ್ತೇನೆ ಎಂದ್ದಿರುವ ಸಿಎಂ ಸಿದ್ದರಾಮಯ್ಯ, ನಮ್ಮ ರಾಜ್ಯದ ಪೊಲೀಸ್ ವರಿಷ್ಠರು ಕನ್ನಡಿಗರ ರಕ್ಷಣೆಗಾಗಿ ತಮಿಳುನಾಡಿದ ಪೊಲೀಸ್ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆ ಬದ್ಧ ಎಂದಿದ್ದಾರೆ.