ನಮ್ಮ ನಮ್ಮಲ್ಲೇ ಚರ್ಚಿಸಿ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಕುರಿತು ಚರ್ಚಿಸಲು ದಿನಾಂಕ ನಿಗದಿಪಡಿಸುವಂತೆ ಸಿದ್ದರಾಮಯ್ಯ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಗೆ ಪತ್ರ ಬರೆದಿದ್ದಾರೆ.
ಬೆಂಗಳೂರು(ಜು.12):ಮಹದಾಯಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರ ಮತ್ತು ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನಮ್ಮ ನಮ್ಮಲ್ಲೇ ಚರ್ಚಿಸಿ ಸಮಸ್ಯೆಯನ್ನು ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಕುರಿತು ಚರ್ಚಿಸಲು ದಿನಾಂಕ ನಿಗದಿಪಡಿಸುವಂತೆ ಸಿದ್ದರಾಮಯ್ಯ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ಮೇ 5 ರಂದು ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದಕ್ಕೆ ಜುಲೈ 7 ರಂದು ಮಹಾ ಸಿಎಂ ಪತ್ರ ಬರೆದು, ಸಮಸ್ಯೆ ಇತ್ಯರ್ಥಕ್ಕೆ ತೋರಿಸಿದ ಆಸಕ್ತಿ ಬಗ್ಗೆ ಅಭಿನಂದನೆ ಸಲ್ಲಿಸಿದ್ರು. ಇದೀಗ ಆ ಅಭಿನಂದನೆಗೆ ಪತ್ರ ಬರೆಯುವ ಮೂಲಕ ಗೋವಾ ಸಿಎಂ ಮತ್ತು ತಾವು ಮಹದಾಯಿ ಕುರಿತಂತೆ ಸಭೆ ದಿನಾಂಕ ನಿಗದಿ ಪಡಿಸಿ, ಆ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
