ಬೆಂಗಳೂರು(ಸೆ.22): ಕಾವೇರಿ ನೀರು ಬಿಡುಗಡೆ ಕಗ್ಗಂಟಿನ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹಾರಿದ್ದಾರೆ.
ಪಕ್ಷದ ವರಿಷ್ಠರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಪ್ರೀಂಕೋರ್ಟ್‌ನೀಡಿರುವ ಆದೇಶದಿಂದ ಉಂಟಾಗಿರುವ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ವಿವರಿಸಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ವಿಶೇಷ ಅಧಿವೇಶನ ಕರೆದಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಅದಾದ ಬಳಿಕ ಹಿರಿಯ ಕಾಂಗ್ರೆಸ್ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಸರ್ಕಾರದ ಮುಂದಿರುವ ಸವಾಲುಗಳ ಬಗ್ಗೆ ಸಲಹೆ ಪಡೆದಿದ್ದು, ಮಧ್ಯಾಹ್ನ 12ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ, ಸಂಜೆ ವಾಪಸ್‌ಆಗಲಿದ್ದಾರೆ.
