ಭಾನುವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಈ ಸಂದರ್ಭ ಹೈಕಮಾಂಡ್‌ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು (ಏ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ದೆಹಲಿಗೆ ತೆರಳಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಚಿವ ಸಂಪುಟಕ್ಕೆ ಸೇರ್ಪಡೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೈಕಮಾಂಡ್‌ನ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಭಾನುವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಈ ಸಂದರ್ಭ ಹೈಕಮಾಂಡ್‌ ವರಿಷ್ಠರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೇಟಿಗೆ ಅವಕಾಶ ದೊರೆತರೆ ರಾಜ್ಯ ಕಾಂಗ್ರೆಸ್‌ಗೆ ಸಂಬಂಧಿಸಿ ಚರ್ಚೆ ನಡೆಸಲಿ​ದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್‌ ಜತೆ ಚರ್ಚಿಸಬೇಕು. ಚರ್ಚೆ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಭಾನುವಾರ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದರೂ ಹೈಕಮಾಂಡ್‌ ಭೇಟಿ ಮಾಡುವು​ದಿಲ್ಲವೆಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.