ಬೆಂಗಳೂರು: ಚಾಕು ಇರಿತಕ್ಕೊಳಗಾಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಆರೋಪಿಯು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ವಿಚಾರಣೆ ಬಳಿಕ ಅದನ್ನು ಲೋಕಾಯುಕ್ತರು ಮುಕ್ತಾಯಗೊಳಿಸಿದ್ದಾರೆ. ಅದರಿಂದ ಅಸಮಾಧಾನಗೊಂಡಿದ್ದ ಆರೋಪಿ ಚಾಕುವಿನೊಂದಿಗೆ ಬಂದು ಕೊಲೆಯತ್ನ ಮಾಡಿದ್ದಾನೆ, ಎಂದು ಸಿಎಂ ಹೇಳಿದ್ದಾರೆ.

ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ  ಡಿಜಿಪಿಗೆ ಸೂಚಿಸಿದ್ದೇನೆ, ಎಂದು ಸಿಎಂ ಹೇಳಿದ್ದಾರೆ.

 ನ್ಯಾ. ವಿಶ್ವನಾಥ್ ಶೆಟ್ಟಿಯವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ, ಎಂದು ಸಿಎಂ ತಿಳಿಸಿದ್ದಾರೆ.