ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪಾರ್ವತಮ್ಮ ರಾಜಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ
ಬೆಂಗಳೂರು (ಮೇ.16): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪಾರ್ವತಮ್ಮ ರಾಜಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಪಾರ್ವತಮ್ಮ ರಾಜ್‌ಕುಮಾರ್ ಅವರನ್ನು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು ಸೋಮವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರನ್ನು ವಿವಿಧ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ವರದಿ ಬಂದ ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಫಿಸಿಶಿಯನ್ ಡಾ. ಸಂಜಯ್ ಕುಲಕರ್ಣಿ ನೇತೃತ್ವದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು ಯಾವುದೇ ಆತಂಕದ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿರುವುದಾಗಿ ಡಾ. ರಾಜ್ ಕುಟುಂಬ ತಿಳಿಸಿದೆ.
