ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಲಂಚ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಲಂಚ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಸ್ವಾಗತಿಸಿದ ಇಬ್ಬರು ಮಹಿಳೆಯರಿಗೆ ತಲಾ ಎರಡು ಸಾವಿರ ರು. ಲಂಚ ನೀಡಿದ್ದಾರೆ. ಅಲ್ಲದೇ, ಹಳ್ಳಿಯೊಂದರಲ್ಲಿ ಆರತಿ ಬೆಳಗುವ ಮೂಲಕ ಸ್ವಾಗತಿಸಲಾಯಿತು. ಈ ವೇಳೆ ಆರತಿ ಬೆಳಗುವ ತಟ್ಟೆಯಲ್ಲಿ ಎರಡು ಸಾವಿರ ರು. ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ.
ಮಾಧ್ಯಮಗಳ ವರದಿ ಆಧರಿಸಿ ದೂರು ನೀಡಲಾಗಿದೆ. ಮಾಧ್ಯಮಗಳಲ್ಲಿ ವರದಿ ಬಂದರೂ ಸಂಬಂಧಪಟ್ಟಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ತಕ್ಷಣವೇ ಸಂಬಂಧಪಟ್ಟಅಧಿಕಾರಿಗಳಿಗೆ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.
