ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾ.ಗಿರೀಶ್ ಚಂದ್ರ ವರ್ಮಾ ಅವರು ಲಕ್ಷಾಂತರ ರುಪಾಯಿ ಮೌಲ್ಯದ ಹ್ಯೂಬ್ಲೋ ವಾಚ್ ಉಡುಗೊರೆ ನೀಡಿದ್ದಾ ರೆ ಎನ್ನಲಾದ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ರಾಜ್ಯ ಹೈಕೋರ್ಟಲ್ಲಿ ಇಂದು ವಿಚಾರಣೆಗೆ ನಿಗದಿಯಾಗಿದೆ.

ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿರುವ ರಜಾಕಾಲದ ವಿಭಾಗೀಯ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ. ಪ್ರಧಾನಿ ಕಚೇರಿಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ, ಪಿಂಚಣಿ ಸಚಿವಾಲಯದ ಅಧೀನ ಕಾರ್ಯ ದರ್ಶಿ, ಸಿಬಿಐ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್.ವಿ.ದೇಶಪಾಂಡೆ, ಪ್ರಮೋದ್ ಮಧ್ವರಾಜ್, ರಮೇಶ್ ಕುಮಾರ್, ಐಎಎಸ್ ಅಧಿಕಾರಿ ಡಾ. ಶಾಲಿನಿ ರಜನೀ ಶ್, ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಮತ್ತು ಡಾ.ಗಿರೀಶ್ ಚಂದ್ರ ವರ್ಮಾ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳ ನ್ನಾಗಿ ಮಾಡಲಾಗಿದೆ. 

ಉಡುಪಿಯ ಹಾಜಿ ಅಬ್ದುಲ್ ‘ಮಕ್ಕಳು ಮತ್ತು ಹೆರಿಗೆ ಆಸ್ಪತ್ರೆ’ಯನ್ನು 250 ಕೋಟಿ ರು. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ನಿರ್ಮಿಸಲು ಹಾಗೂ 475 ಕೋಟಿ ರು.ವೆಚ್ಚದಲ್ಲಿ ಜೋಗ ಜಲಪಾತ ವನ್ನು ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಸಂಬಂಧರಾಜ್ಯ ಸರ್ಕಾರ ಮತ್ತು ಉದ್ಯಮಿ ಬಿ.ಆರ್. ಶೆಟ್ಟಿ ನಡುವೆ ಒಪ್ಪಂದ ಏರ್ಪಟ್ಟಿದೆ. ಇದರಲ್ಲಿ ಮಧ್ಯವರ್ತಿಯಾಗಿದ್ದವರೇ ಡಾ.ಗಿರೀಶ್ ಚಂದ್ರ ವರ್ಮಾ. ಇದರಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾ.ಗಿರೀಶ್ ಚಂದ್ರ ವರ್ಮಾ ಕಿಕ್‌ಬ್ಯಾಕ್ ರೂಪದಲ್ಲಿ ಹ್ಯೂಬ್ಲೋ ವಾಚ್ ಉಡುಗೊರೆ ನೀಡಿದ್ದಾರೆ ಎಂದು ದೂರಲಾಗಿದೆ.