ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.
ಬೆಂಗಳೂರು : ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.
ನಮ್ಮ ಬೆಂಗಳೂರಿಗೆ ಇಂದು ಆಗಮಿಸುತ್ತಿರುವ ಪ್ರಧಾನಿ ಅವರೇ ನಿಮಗೆ ಸ್ವಾಗತ. ಸಂದರ್ಭದಲ್ಲಿ ನೀವು ನಮ್ಮ ಜನರ ಮಹದಾಯಿ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಕಾರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ಮತ್ತೊಂದು ಟ್ವೀಟ್’ನಲ್ಲಿ ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳಲ್ಲಿ ನಂ.1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಸ್ವಾಗತ ಎಂದು ಹೇಳಿದ್ದಾರೆ.
