ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅಂತರ್ಜಲ ಬರಿದಾಗಿದೆ. ಎತ್ತಿನಹೊಳೆ ಯೋಜನೆಯೂ ಕುಂಟುತ್ತಾ ಸಾಗುತ್ತಿರುವುದರಿಂದ ಸರ್ಕಾರ ಹೊಸ ಪ್ಲಾನ್ ಮಾಡಿದೆ.
ಚಿಕ್ಕಬಳ್ಳಾಪುರ(ಸೆ.18): ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅಂತರ್ಜಲ ಬರಿದಾಗಿದೆ. ಎತ್ತಿನಹೊಳೆ ಯೋಜನೆಯೂ ಕುಂಟುತ್ತಾ ಸಾಗುತ್ತಿರುವುದರಿಂದ ಸರ್ಕಾರ ಹೊಸ ಪ್ಲಾನ್ ಮಾಡಿದೆ.
ದೇಶದಲ್ಲೇ ಪ್ರಪ್ರಥಮ ಬಾರಿ ವಿಭಿನ್ನ ನೀರಾವರಿ ಯೋಜನೆಗೆ ಮುಂದಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆರೆ ತುಂಬಿಸುವ ಯೋಜನೆಗೆ ಹೆಬ್ಬಾಳ, ನಾಗವಾರ ಕೆರೆಯ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ತುಂಬಿಸುವ ದೇಶದ ಮೊದಲ ಪ್ರಯತ್ನ ಇದಾಗಿದೆ. ಒಟ್ಟು 883.54 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸೂಲಾಲಪ್ಪನ ದಿನ್ನೆ ಬಳಿ ಬೃಹತ್ ವೇದಿಕೆ ಸಿದ್ದಪಡಿಸಲಾಗಿದೆ.
ಈ ಯೋಜನೆಗೆ ನೀರಾವರಿ ಹೋರಾಟ ಸಮಿತಿ ಹಾಗೂ ವಿರೋಧ ಪಕ್ಷಗಳ ವಿರೋಧ ಇರುವುದರಿಂದ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಕೆಲವು ನೀರಾವರಿ ಹೋರಾಟಗಾರರನ್ನು ಮುಂಜಾಗ್ರತ ಕ್ರಮವಾಗಿ ಬಂಧಿಸಿದ್ದಾರೆ.
