ಬೆಂಗಳೂರು (ಅ.06): ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ.
ಅಕ್ಟೋಬರ್ 21ರಂದು ಮುಂಬೈನಲ್ಲಿ ಕರೆಯಲಾಗಿರುವ ಸಭೆಯಲ್ಲಿ ಕರ್ನಾಟಕ, ಗೋವಾ, ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಪತ್ರ ಬರೆದಿದ್ದಾರೆ.
