ಸಿಎಂ ಎಚ್.ಡಿ ಕುಮಾರಸ್ವಾಮಿ ನೂತನ ಬಜೆಟ್‌ನಲ್ಲಿ ಏನಿರಲಿದೆ ?

Coalition government is going to present its first budget in July
Highlights

ಬಜೆಟ್‌ ಮಂಡನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜುಲೈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 

ಬೆಂಗಳೂರು :  ಬಜೆಟ್‌ ಮಂಡನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜುಲೈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆ.ಪಿ.ನಗರ ನಿವಾಸದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಜೆಟ್‌ ಮಂಡನೆಗೆ ಸಂಬಂಧಪಟ್ಟಂತೆ ರೂಪರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಈಗಾಗಲೇ ಸಭೆ ನಡೆಸಲಾಗಿದೆ. ಅಲ್ಲದೇ, ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್‌ ಪೂರ್ವ ಸಭೆಗಳನ್ನು ಮಾಡಲಾಗಿದೆ. ಜುಲೈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುತ್ತಿದೆ. ರಾಜಕೀಯ ಮಾಡಲು ಬೇರೆಯವರಿದ್ದಾರೆ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಐದು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿರಲಿದೆ. ಅಲ್ಲದೇ, ಕೆಲವು ಸಮಸ್ಯೆಗಳು ಇನ್ನೊಂದು ವಾರದಲ್ಲಿ ಬಗೆಹರಿಯಲಿವೆ. ಸರ್ಕಾರ ಪತನವಾಗಲಿದೆ ಎಂದು ಹಗಲುಗನಸು ಕಾಣುವವರು ಕಾಣುತ್ತಿರಲಿ ಎಂದು ಪ್ರತಿಪಕ್ಷ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.

loader