ಸಿಎಂ ಪುತ್ರನಿಂದಲೇ ನೀತಿಸಂಹಿತೆ ಉಲ್ಲಂಘನೆಯಾಗಿದೆ. ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಸಿಎಂ ಪುತ್ರ ಯತೀಂದ್ರ.
ಬೆಂಗಳೂರು (ಮಾ. 29): ಸಿಎಂ ಪುತ್ರನಿಂದಲೇ ನೀತಿಸಂಹಿತೆ ಉಲ್ಲಂಘನೆಯಾಗಿದೆ. ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಮಾಡಿ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಸಿಎಂ ಪುತ್ರ ಯತೀಂದ್ರ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ ಯತೀಂದ್ರ ಜನತಾ ನಗರದ ಶ್ರೀ ಶನೇಶ್ವರ ದೇವಾಲಯದಲ್ಲಿ ಪ್ರಚಾರ ನಡೆಸಿದ್ದಾರೆ. ಶಾಲಾ ಆವರಣ,ದೇವಾಲಯಗಳ ಆವರಣದಲ್ಲಿ ಪ್ರಚಾರ ನಡೆಸುವಂತಿಲ್ಲ ಎಂಬ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಯತೀಂದ್ರ ವಿರುದ್ದ ಆರೋಪ ಮಾಡಿದ್ದಾರೆ. ತಕ್ಷಣವೇ ಯತೀಂದ್ರ ವಿರುದ್ದ ದೂರು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಚುನಾವಣಾ ಪ್ರಚಾರದ ಬಿಸಿ ಹೆಚ್ಚಾಗಿದೆ.
